ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಾಜಿ ರಾಜ್ಯಪಾಲೆ ರಮಾದೇವಿ ವಿಧಿವಶ

ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲೆ ವಿ.ಎಸ್.ರಮಾದೇವಿ ಅವರು ಬುಧವಾರ ವಿಧಿವಶರಾಗಿದ್ದಾರೆ.

Lingaraj Badiger
Updated On : 17 Apr 2013, 5:11 am

ಬೆಂಗಳೂರು: ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲೆ ವಿ.ಎಸ್.ರಮಾದೇವಿ ಅವರು ಬುಧವಾರ ವಿಧಿವಶರಾಗಿದ್ದಾರೆ.

ದೀರ್ಘಕಾಲದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 79 ವರ್ಷದ ರಮಾದೇವಿ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು 1999ರಿಂದ 2002ರವರೆಗೆ ರಾಜ್ಯದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಮೂಲದವರಾಗಿದ್ದ ರಮಾದೇವಿ ಅವರು 1934, ಜನವರಿ 15ರಂದು ಜನಸಿದ್ದರು. 1990ರ ನವೆಂಬರ್ 26ರಿಂದ ಡಿಸೆಂಬರ್ 12ರವರೆಗೆ ಅವರು ಮುಖ್ಯ ಚುನಾವಣಾ ಆಯುಕ್ತರಾಗಿಯೂ ಸೇವೆ ಸಲ್ಲಿಸಿ, ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement