ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಫೋಟದ ಹಿಂದೆ ಉಗ್ರರ ಕೈವಾಡ: ಎನ್‌ಐಎ ಶಂಕೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟದ ಹಿಂದೆ ಉಗ್ರರ..

Lingaraj Badiger
Updated On : 17 Apr 2013, 1:45 am

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟಕ್ಕೆ ಐಇಡಿ(ಸುಧಾರಿತ ಸ್ಫೋಟಕ ಸಾಧನ)ಯನ್ನು ಬಳಸಲಾಗಿದೆ ಎಂಬುದು ಎನ್‌ಐಎ ನಡೆಸಿದ ಪ್ರಾಥಮಿಕ ತನಿಖಾ ವರದಿಯಿಂದ ತಿಳಿದು ಬಂದಿದೆ.

ಸ್ಫೋಟಕ್ಕೆ ಬಳಸಲಾದ ಬೈಕ್ ಕಳೆದ ರಾತ್ರಿಯಿಂದ ಇಲ್ಲೆ ಇದ್ದು, ಇಂದು ಬೆಳಗ್ಗೆ 10.28ಕ್ಕೆ ಬಾಂಬ್ ಸ್ಫೋಟಗೊಂಡಿದೆ ಎಂದು ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement