ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಬಂಧನ
ಚುನಾವಣಾ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ..
ಬೆಂಗಳೂರು: ಚುನಾವಣಾ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಚಿತ್ರ ನಿರ್ಮಾಪಕ ಮುನಿರತ್ನ ಅವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಮುನಿರತ್ನ ಅವರು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜ್ಯೋತಿ ಅವರು ನಿನ್ನೆ ರಾತ್ರಿ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಜ್ಯೋತಿ ಅವರ ದೂರನ್ನು ಪರಿಗಣಿಸಿದ ರಾಜರಾಜೇಶ್ವರಿ ನಗರದ ಪೊಲೀಸರು ಮುನಿರತ್ನ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಇನ್ನು ಜ್ಯೋತಿ ಅವರು ಈ ಬಗ್ಗೆ ಚುನಾವಣಾ ಆಯುಕ್ತರಿಗೂ ಮಾಹಿತಿ ನೀಡಿದ್ದು, ಒಂದು ವೇಳೆ ಕೇಂದ್ರ ಚುನಾವಣಾ ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇಯಾದರೆ ಮುನಿರತ್ನ ಅವರ ನಾಮಪತ್ರ ತಿರಸ್ಕಾರಗೊಳ್ಳುವ ಸಾಧ್ಯತೆ ಇದೆ.