ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆಯಿಂದ ಜೆಡಿಎಸ್ ಚುನಾವಣಾ ಪ್ರಚಾರ

Vishwanath S
Updated On : 18 Apr 2013, 8:17 am

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ಚುನಾವಣಾ ಪ್ರಚಾರವನ್ನು ನಡೆಸಲು ಜೆಡಿಎಸ್ ಸಿದ್ದತೆ ಮಾಡಿಕೊಂಡಿದೆ.

ಮೇ 5ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಈಗಾಗಲೇ ಇತರ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಆದರೆ ಜೆಡಿಎಸ್ ನಾಳೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಲಿದೆ.

ಶುಕ್ರವಾರದಿಂದ ಜೆಡಿಎಸ್ ಪ್ರಚಾರ ಆರಂಭಗೊಳ್ಳಲಿದೆ ಎಂದು ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮುಂದಿನ ವಿಧಾನಸಭೆ ಚುನಾವಣೆ ಸಂಬಂಧ ರಾಜ್ಯದಲ್ಲಿ ಪ್ರಚಾರ ಕಾರ್ಯಕ್ಕೆ ನಾಳೆ ಚಾಲನೆ ನೀಡಲಿದ್ದು, ರಾಜ್ಯಾದ್ಯಂತ ಮೇ 3ರವರಗೆ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದೆವೆ. ನಮ್ಮ ಪಕ್ಷ ಹೆಚ್ಚು ಸಧೃಡವಾಗಿದ್ದು, ಅಭ್ಯರ್ಥಿಗಳಿಗೆ ಟಿಕೇಟ್ ನೀಡುವ ವಿಷಯದಲ್ಲಿ ಯಾರಿಗೂ ನಿರಾಸೆಯಾಗಿಲ್ಲ. ಹಾಗಾಗಿ ನಮ್ಮ ಪಕ್ಷದಲ್ಲಿ ಬಂಡಾಯ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement