ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಾಂಬ್ ರಾಜಕೀಯ: ಸಿದ್ದು, ವಿಶ್ವನಾಥ್ ಬಂಧನಕ್ಕೆ ಈಶ್ವರಪ್ಪ ಆಗ್ರಹ

ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಇದೀಗ ರಾಜಕೀಯ..

Lingaraj Badiger
Updated On : 19 Apr 2013, 1:34 am

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯ ಹಿಂದೆ ಆರ್‌ಎಸ್‌ಎಸ್ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಸಂಸದ ಎಚ್.ವಿಶ್ವನಾಥ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಬಾಂಬ್ ಸ್ಫೋಟಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಈ ಘಟನೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲಿದೆ ಎಂದು ಹೇಳಿದರು. ಅವರ ಈ ಹೇಳಿಕೆಯನ್ನು ನಾನು ತೀವ್ರ ಖಂಡಿಸುತ್ತೇನೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಉಗ್ರರು ಎಸಗಿದ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಕಿಡಿಕಾರಿದ ಈಶ್ವರಪ್ಪ, ನಾಯಕರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದಿದ್ದಾರೆ.

ಮಾಲೇಗಾಂವ ಸ್ಫೋಟದ ಮಾದರಿಯಲ್ಲೇ ಈ ಸ್ಫೋಟ ಸಂಭವಿಸಿದೆ. ಅದೂ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಸಮೀಪದಲ್ಲೇ ನಡೆದಿದ್ದು, ಬಾಂಬ್ ಸ್ಫೋಟದ ಹಿಂದೆ ಆರ್‌ಎಸ್‌ಎಸ್ ಕೈವಾಡ ತಳ್ಳಿ ಹಾಕುವಂತಿಲ್ಲ ಎಂದು ವಿಶ್ವನಾಥ್ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement