ಬೋಸ್ಟನ್ ಬಾಂಬ್ ಪ್ರಕರಣ: ಶಂಕಿತ ಆರೋಪಿ ಸಾವು, ಇನ್ನೊಬ್ಬನಿಗಾಗಿ ಶೋಧ
ಅಮೆರಿಕದ ಬೋಸ್ಟನ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಶುಕ್ರವಾರ ಸಾವನ್ನಪ್ಪಿದ್ದಾನೆ ಎಂದು...
ಬೋಸ್ಟನ್: ಅಮೆರಿಕದ ಬೋಸ್ಟನ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಶುಕ್ರವಾರ ಸಾವನ್ನಪ್ಪಿದ್ದಾನೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
ಬೋಸ್ಟನ್ನಲ್ಲಿ ಮ್ಯಾರಥಾನ್ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟ ನಡೆಸಿದ್ದ ಈತನನ್ನು ಶುಕ್ರವಾರ ಬಂಧಿಸಲಾಗಿತ್ತು. ಅದೇ ವೇಳೆ ಈ ಪ್ರಕರಣದಲ್ಲಿ ಶಾಮೀಲಾಗಿರುವ ಇನ್ನೊಬ್ಬ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಶುಕ್ರವಾರ ಬೋಸ್ಟನ್ ಬಳಿಯಲ್ಲಿರುವ ವಾಟರ್ಟೌನ್ ಬಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದರು. ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಗುಂಡಿಗೆ ಬಲಿಯಾಗಿದ್ದು, ಇನ್ನೊಬ್ಬ ಪೊಲೀಸ್ ಪೇದೆಗೆ ಗಾಯಗಳಾಗಿವೆ ಎಂದು ಬಲ್ಲಮೂಲಗಳು ತಿಳಿಸಿವೆ.
ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ನಿಯೋಜಿಸಲಾಗಿದ್ದು, ಇನ್ನೋರ್ವ ಆರೋಪಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.