ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸುವ 'ಕೈ' ಪ್ರಯತ್ನ ಫಲ ನೀಡಿದ್ದು, ಬೆಂಗಳೂರಿನ ಮೂವರು ಬಂಡಾಯ..
ಬೆಂಗಳೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸುವ 'ಕೈ' ಪ್ರಯತ್ನ ಫಲ ನೀಡಿದ್ದು, ಬೆಂಗಳೂರಿನ ಮೂವರು ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಶನಿವಾರ ನಿರ್ಧರಿಸಿದ್ದಾರೆ.
ಇಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾದ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಸುಷ್ಮಾ ರಾಜಗೋಪಾಲರೆಡ್ಡಿ, ರಾಜಾಜಿನಗರ ಬಂಡಾಯ ಅಭ್ಯರ್ಥಿ ಪದ್ಮಾವತಿ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಹನುಮಂತರಾಯಪ್ಪ ಅವರು ತಮ್ಮ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇನ್ನು ಕೇಂದ್ರ ಸಚಿವ ಸರ್ವೆ ಸತ್ಯನಾರಾಯಣ ಅವರ ಮನವೊಲಿಕೆ ಪ್ರಯತ್ನದ ಫಲವಾಗಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಚಂದ್ರಶೇಖರ್ ಅವರು ಸಹ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.