ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೀವ್ರಗೊಂಡ ಪ್ರತಿಭಟನೆ, ಚೇತರಿಕೆಯತ್ತ ಬಾಲಕಿ

5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

Srinivasa Murthy VN
Updated On : 21 Apr 2013, 6:46 am

ನವದೆಹಲಿ: 5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪುಟ್ಟ ಬಾಲಕಿಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, ರಾಷ್ಟ್ರಪತಿ ಭವನ, ದೆಹಲಿ ಮುಖ್ಯಮಂತ್ರಿ ಶೀಲಾದೀಕ್ಷಿತ್ ಅವರ ಕಚೇರಿ, ಪೊಲೀಸ್ ಪ್ರಧಾನ ಕಚೇರಿ ಮತ್ತು ಪ್ರಧಾನಿ ಕಚೇರಿಗಳ ಮುಂದೆ ನೂರಾರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ನಿವಾಸ ಜನಪಥ್ ನಿವಾಸದ ಎದುರು ಬಿಜೆಪಿ ಮಹಿಳಾ ವಿಭಾಗದ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹಲವು ಕಾರ್ಯಕರ್ತರು ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ಸೋನಿಯಾ ನಿವಾಸ ಪ್ರವೇಶಿಸಲು ಯತ್ನಿಸಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸುತ್ತಿದ್ದಾರೆ. ಇತ್ತ ರಾಷ್ಟ್ರಪತಿ ಭವನದ ಬಳಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರತಿಭಟನಾಕಾರರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸುತ್ತಿದ್ದಾರೆ. ಪ್ರತಿಭಟನಾನಿರತ ಯುವತಿಯ ಕಪಾಳಕ್ಕೆ ಹೊಡೆದ ದೆಹಲಿ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಅವರನ್ನು ತತ್‌ಕ್ಷಣವೇ ಅಮಾನತು ಮಾಡಬೇಕು ಎಂದು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ಚೇತರಿಸಿಕೊಳ್ಳುತ್ತಿರುವ ಬಾಲಕಿ
23 ವರ್ಷದ ಯುವಕನಿಂದ ಕ್ರೂರವಾಗಿ ಅತ್ಯಾಚಾರಕ್ಕೊಳಗಾದ 5 ವರ್ಷದ ಪುಟ್ಟ ಬಾಲಕಿಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಬಾಲಕಿಯ ಗುಪ್ತಾಂಗಕ್ಕೆ ಅಂಗಪುನರ್ರಚನಾ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ನಿನ್ನೆ ಹೇಳಿದ್ದ ವೈದ್ಯರು, ಇಂದು ಬಾಲಕಿಗೆ ಶಸ್ತ್ರ ಚಿಕಿತ್ಸೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement