ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ: ಜಿ.ಪರಮೇಶ್ವರ್
ನಾಮಪತ್ರವನ್ನು ವಾಪಸ್ ಪಡೆಯದ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು: ನಾಮಪತ್ರವನ್ನು ವಾಪಸ್ ಪಡೆಯದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪ್ರಚಾರದ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು, ಕಾಂಗ್ರೆಸ್ ಪಕ್ಷ ಸಶಕ್ತವಾಗಿದ್ದು, ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಜಯಗಳಿಸಲಿದೆ. ಬಿಜೆಪಿ ದುರಾಡಳಿತದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಬೀಸುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದ್ದು, ಸ್ವಚ್ಛ ಆಡಳಿತ ನೀಡಲಿದೆ ಎಂದು ಅವರು ಹೇಳಿದರು.
ಅಲ್ಲದೆ ಹೈಕಮಾಂಡ್ ಸೂಚನೆಯನ್ನು ಮೀರಿ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಸೆಣಸುತ್ತಿರುವ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.