ಭ್ರಷ್ಟಾಚಾರ, ಭಯೋತ್ಪಾದನೆ ಸಹಿಸಲ್ಲ: ಅಡ್ವಾಣಿ
ಬಿಜೆಪಿ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ಸಹಿಸಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.
ರಾಣೆಬೆನ್ನೂರು: ಬಿಜೆಪಿ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ಸಹಿಸಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.
ರಾಣೆಬೆನ್ನೂರಿನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅಡ್ವಾಣಿ ಅವರು, ರಾಜ್ಯ ಬಿಜೆಪಿಯಲ್ಲಿ ಹಲವು ಮಹತ್ತರ ಬದಲಾವಣೆಗಳಾಗಿವೆ. ಜಗದೀಶ್ ಶೆಟ್ಟರ್ ಮತ್ತು ಡಿ.ವಿ ಸದಾನಂದಗೌಡರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅಡ್ವಾಣಿ ವಿಶ್ವಾಸ ವ್ಯಕ್ತಪಡಿಸಿದರು.
'ಬಿಜೆಪಿ ಎಂದಿಗೂ ಭ್ರಷ್ಟಾಚಾರವನ್ನಾಗಲಿ ಅಥವಾ ಭಯೋತ್ಪಾದನೆಯನ್ನಾಗಲಿ ಎಂದಿಗೂ ಸಹಿಸುವುದಿಲ್ಲ. ಯಡಿಯೂರಪ್ಪ ಅವರ ಪಕ್ಷದಿಂದ ಹೊರನಡೆದ ನಂತರ ಶೆಟ್ಟರ್ ಮತ್ತು ಸದಾನಂದಗೌಡರು ಪಕ್ಷದ ನೇತೃತ್ವ ವಹಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಕ್ಷ ಖಂಡಿತ ಜಯ ಸಾಧಿಸಲಿದ್ದು, ಕರ್ನಾಟಕದ ಜನತೆಗೆ ಬಿಜೆಪಿ ಖಂಡಿತಾ ಉತ್ತಮ ಆಡಳಿತವನ್ನು ನೀಡಲಿದೆ' ಎಂದು ಹೇಳಿದರು.
ಒಟ್ಟಾರೆ ರಾಜ್ಯ ಚುನಾವಣೆಗೆ ವಿವಿಧ ಪಕ್ಷಗಳ ಘಟಾನುಘಟಿ ನಾಯಕರು ಪ್ರಚಾರ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಮನಮೋಹನ್ ಸಿಂಗ್, ನರೇಂದ್ರ ಮೋದಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಸೇರಿದಂತೆ ಮತ್ತಷ್ಟು ನಾಯಕರು ಕರ್ನಾಟಕಕ್ಕೆ ಆಗಮಿಸಿ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.