ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಎಸ್‌ವೈಯಿಂದ ಆಡ್ವಾಣಿ, ಮಕ್ಕಳು ಹಣ ಪಡೆದಿದ್ದಾರೆ: ಧನಂಜಯ್

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಹಾಗೂ ಅವರ ..

Lingaraj Badiger
Updated On : 22 Apr 2013, 2:10 am

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಹಾಗೂ ಅವರ ಮಕ್ಕಳು ಹೆದರಿಸಿ, ಬೆದರಿಸಿ ಹಣ ಪಡೆದಿದ್ದಾರೆ ಎಂದು ಕೆಜೆಪಿ ಮುಖಂಡ ಧನಂಜಯ್ ಕುಮಾರ್ ಅವರು ಸೋಮವಾರ ಹೊಸ ಬಾಂಬ್ ಸಿಡಿಸಿದ್ದಾರೆ.

ಯಡಿಯೂರಪ್ಪ ಸೇರಿದಂತೆ ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಯಿಂದ ಆಡ್ವಾಣಿ ಅವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಧನಂಜಯ್ ಕುಮಾರ್, ಯಡಿಯೂರಪ್ಪ ಅವರು ಪ್ರತಿ ತಿಂಗಳು ಆಡ್ವಾಣಿಗೆ ಹಣ ನೀಡಿದ್ದಾರೆ. ಈ ಬಗ್ಗೆ ತಮ್ಮ ಬಳಿ ದಾಖಲೆಗಳಿದ್ದು, ಸೂಕ್ತ ಸಮಯದಲ್ಲಿ ಅವುಗಳನ್ನು ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ.

ಬಿಎಸ್‌ವೈಯನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ಆಡ್ವಾಣಿ ಮತ್ತು ಬಿಜೆಪಿಯ ಇತರ ಮೂವರು ನಾಯರು ಹಣ ಪಡೆದಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಹೇಳುತ್ತೇನೆ ಎಂದು ಧನಂಜಯ್ ತಿಳಿಸಿದ್ದಾರೆ.

ಇನ್ನು ಧನಂಜಯ್ ಆರೋಪದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಧನಂಜಯ್ ಹೇಳಿಕೆ ಆಕಾಶಕ್ಕೆ ಉಗುಳಿದಂತೆ, ಅದು ಅವರ ಮುಖಕ್ಕೆ ಸಿಡಿಯಲಿದೆ ಎಂದಿದ್ದಾರೆ. ಅಲ್ಲದೆ ಆಡ್ವಾಣಿ ಬಗ್ಗೆ ಧನಂಜಯ್ ಹತಾಶೆಯಿಂದ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಆಡ್ವಾಣಿ ಬಗ್ಗೆ ಹಗುರವಾಗಿ ಮಾತನಾಡಬೇಡಿ, ಆರೋಪ ಮಾಡುವ ಮೊದಲು ಯೋಚನೆ ಮಾಡಬೇಕು. ಆಡ್ವಾಣಿ ಒಬ್ಬ ರಾಜಕೀಯ ಸಂತ ಎಂದು ಜೋಶಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement