ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆದರಿಕೆ ಪ್ರಕರಣ: ಸಂಜಯ್‌ದತ್‌ಗೆ ಜಾಮೀನು

ನಿರ್ಮಾಪಕನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಧೇರಿ ನ್ಯಾಯಾಲಯ ನಟ ಸಂಜಯ್ ದತ್‌ಗೆ ಜಾಮೀನು ಮಂಜೂರು ಮಾಡಿದೆ.

Srinivasa Murthy VN
Updated On : 22 Apr 2013, 6:08 am

ಮುಂಬೈ: ನಿರ್ಮಾಪಕನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಾಲಿವುಡ್ ನಟ ಸಂಜಯ್ ದತ್‌ಗೆ ಜಾಮೀನು ಮಂಜೂರು ಮಾಡಿದೆ.

ಬಾಲಿವುಡ್ ಚಿತ್ರ ನಿರ್ಮಾಪಕ ಶಕೀಲ್ ನೂರಾನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡುತ್ತಿದ್ದಂತೆಯೇ, ನಟ ಸಂಜಯ್ ದತ್ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಸಂಜಯ್ ದತ್‌ಗೆ 10 ಸಾವಿರ ರು.ಗಳ ಭದ್ರತಾ ಠೇವಣಿಯ ಮೇಲೆ ಷರತ್ತು ಬದ್ಧ ಜಾಮೀನು ನೀಡಿದೆ.

2002ರಲ್ಲಿ 'ಜಾನ್ ಕೀ ಬಾಜಿ' ಎಂಬ ಚಿತ್ರದಲ್ಲಿ ನಟಿಸಲು ನಟ ಸಂಜಯ್ ದತ್ ಅವರು ನಿರ್ಮಾಪಕ ನೂರಾನಿಯಿಂದ 50 ಸಾವಿರ ರು.ಗಳನ್ನು ಮುಂಗಡವಾಗಿ ಪಡೆದುಕೊಂಡಿದ್ದರು. ಆದರೆ ಚಿತ್ರದ ಚಿತ್ರೀಕರಣ ಅರ್ಧ ಮುಗಿದ ನಂತರ ಖ್ಯಾತೆ ತೆಗೆದಿದ್ದ ಸಂಜಯದತ್, ಚಿತ್ರದಲ್ಲಿ ತಾವು ನಟಿಸುವುದಿಲ್ಲ ಎಂದು ಹೇಳಿ ಚಿತ್ರದಿಂದ ಹೊರಬಂದಿದ್ದರು. ಅಷ್ಟೇ ಅಲ್ಲದೆ ನಿರ್ಮಾಪಕರು ನೀಡಿದ್ದ ಹಣವನ್ನು ವಾಪಸ್ ನೀಡುವುದಿಲ್ಲ ಎಂದು ನಿರ್ಮಾಪಕ ನೂರಾನಿಗೆ ಬೆದರಿಕೆ ಹಾಕಿದ್ದರು.

ಚಿತ್ರ ನಿರ್ಮಾಪಕ ನೂರಾನಿ ಅವರು ಸಂಜಯ್ ದತ್ ವಿರುದ್ಧ ನ್ಯಾಯಾಲಯದಲ್ಲಿ ಬೆದರಿಕೆ ಪ್ರಕರಣ ದಾಖಲು ಮಾಡಿ, ತಮಗಾದ ನಷ್ಟಕ್ಕೆ ಬದಲಾಗಿ 2.03 ಕೋಟಿ ರು.ಗಳನ್ನು ನಷ್ಟ ಪರಿಹಾರವಾಗಿ ದತ್ ಅವರಿಂದ ಕೊಡಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಂಧೇರಿ ನ್ಯಾಯಾಲಯ ಸಾಕಷ್ಟು ಬಾರಿ ಸಂಜಯದತ್‌ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿತ್ತು ಆದರೆ ಸಂಜಯ್ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಅಂಧೇರಿ ನ್ಯಾಯಾಲಯ ಸಂಜಯ್ ದತ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement