ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕ್ರಿಸ್ ಗೇಲ್ ಅತಿ ವೇಗದ ಶತಕದ ದಾಖಲೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಕ್ರಿಸ್ ಗೇಲ್ ಅವರು ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಶತಕ ದಾಖಲಿಸಿದ್ದಾರೆ.

Lingaraj Badiger
Updated On : 23 Apr 2013, 6:49 am

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಕ್ರಿಸ್ ಗೇಲ್ ಅವರು ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಶತಕ ದಾಖಲಿಸುವ ಮೂಲಕ ಮಂಗಳವಾರ ಹೊಸ ದಾಖಲೆ ನಿರ್ಮಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪುಣೆ ವಾರಿಯರ್ಸ್ ವಿರುದ್ದ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕ್ರಿಸ್ ಗೇಲ್ 30 ಎಸೆತಗಳಲ್ಲಿ 11 ಸಿಕ್ಸ್, 8 ಬೌಂಡರಿ ಸಿಡಿಸುವುದರೊಂದಿಗೆ 102 ರನ್ ಗಳಿಸಿ ವಿಶ್ವ ದಾಖಲೆ ಬರೆದರು.

ಈ ಮುಂಚೆ ಮುಂಬೈ ವಿರುದ್ಧ ಯೂಸುಫ್ ಪಠಾಣ್ ಅವರು 37 ಎಸೆತಗಳಲ್ಲಿ ಶತಕ ಗಳಿಸಿದ್ದರು. ಅದೇ ರೀತಿ ಟಿ20ಯಲ್ಲಿ ಆಸ್ಟ್ರೇಲಿಯಾದ ಆಂಡ್ರ್ಯೂ ಸೈಮಂಡ್ಸ್ ಇಂಗ್ಲೀಷ್ ಕೌಂಟಿಯಲ್ಲಿ ಕೆಂಟ್ ತಂಡದ ಪರ ಕೇವಲ 34 ಎಸೆತಗಳಲ್ಲಿ ಶಕತ ಗಳಿಸಿದ್ದು ದಾಖಲೆಯಾಗಿತ್ತು. ಇದೀಗ ಆ ದಾಖಲೆಯನ್ನು ಕ್ರಿಸ್ ಗೇಲ್ ಮುರಿದಿದ್ದಾರೆ.

ಕ್ರಿಸ್ ಗೇಲ್ (167) ಅವರ ದಾಖಲೆಯ ಶತಕೊಂದಿಗೆ ಆರ್‌ಸಿಬಿ ತಂಡ ದಾಖಲೆಯ 264 ರನ್‌ಗಳ ಭಾರಿ ಮೊತ್ತವನ್ನು ಪೇರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement