ತೃತೀಯ ರಂಗ ಅಧಿಕಾರಕ್ಕೇರಲ್ಲ: ನಾಯ್ಡು
ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗ ಅಧಿಕಾರಕ್ಕೇರುವ ಸಾಧ್ಯತೆಯನ್ನು ತಳ್ಳಿ ಹಾಕಿದ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು, ತೃತೀಯ ರಂಗ...
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗ ಅಧಿಕಾರಕ್ಕೇರುವ ಸಾಧ್ಯತೆಯನ್ನು ತಳ್ಳಿ ಹಾಕಿದ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು, ತೃತೀಯ ರಂಗ ಅಧಿಕಾರಕ್ಕೇರುವ ಕನಸು ನನಸಾಗುವುದಿಲ್ಲ ಎಂದು ಹೇಳಿದ್ದಾರೆ.
ಅದೇ ವೇಳೆ ಯಾವೊಂದು ಪ್ರಾದೇಶಿಕ ಪಕ್ಷಗಳೂ ಅಧಿಕಾರಕ್ಕೇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ತೃತೀಯ ರಂಗ ಅಧಿಕಾರಕ್ಕೇರುವ ಸಾಧ್ಯತೆಯಿಲ್ಲ. ಅಧಿಕಾರಕ್ಕೇರಲು ತೃತೀಯ ರಂಗ ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಅಧಿಕಾರಕ್ಕೇರುವ ತೃತೀಯ ರಂಗದ ಕನಸು ಯಾವತ್ತೂ ನನಸಾಗುವುದಿಲ್ಲ. ಬಿಜೆಪಿಯಂತಹ ದೇಶೀಯ ಪಕ್ಷಗಳು ಮಾತ್ರ ಅಧಿಕಾರಕ್ಕೇರುತ್ತವೆ ಎಂದು ನಾಯ್ಡು ಅಭಿಪ್ರಾಯ ಪಟ್ಟಿದ್ದಾರೆ.
ಆಂಧ್ರಪ್ರದೇಶದಲ್ಲಿ ಕಡ್ಡಾಯ ಮತದಾನ ಅಧಿನಿಯಮ ಹೊರಡಿಸುವುದಕ್ಕಾಗಿ ಆಂಧ್ರಪ್ರದೇಶದ ಕಾರ್ಯಕರ್ತರು ಹಮ್ಮಿಕೊಂಡಿರುವ ಮೂರು ದಿನಗಳ ಉಪವಾಸದಲ್ಲಿ ಪಾಲ್ಗೊಂಡು ಮಾಧ್ಯಮದವರಲ್ಲಿ ಮಾತನಾಡಿದ ನಾಯ್ಡು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿರುವ ಪಕ್ಷಗಳೆಲ್ಲವೂ ಕಾಂಗ್ರೆಸ್‌ನ ಭ್ರಷ್ಟಾಚಾರದ ಭಾಗವಾಗಿದೆ ಎಂದು ಹೇಳಿದ್ದಾರೆ.