ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಸಾಧನೆ ಶೂನ್ಯ: ರಾಹುಲ್ ಗಾಂಧಿ

ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸಾಧನೆ ಶೂನ್ಯ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

Lingaraj Badiger
Updated On : 23 Apr 2013, 2:22 am

ರಾಯಚೂರು: ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸಾಧನೆ ಶೂನ್ಯ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ರಾಜ್ಯಕ್ಕೆ ರಾಹುಲ್ ಎಂಟ್ರಿಕೊಟ್ಟಿದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಯುವರಾಜ, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಬರೀ ಸುಳ್ಳು ಭರವಸೆ ನೀಡುತ್ತಿದೆ. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸಾಧನೆ ಶೂನ್ಯ ಎಂದರು.

ಉದ್ಯೋಗ ಸೃಷ್ಟಿ, ವಿದ್ಯುತ್, ಅಭಿವೃದ್ಧಿಯನ್ನು ಬಿಜೆಪಿ ಮರೆತುಬಿಟ್ಟಿದೆ. 24 ಗಂಟೆ ವಿದ್ಯುತ್ ನೀಡುವುದಾಗಿ ಬಿಜೆಪಿ ಹೇಳಿತ್ತು. ಆದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.

ಇದೇ ವೇಳೆ ಬಿಸಿಲಲ್ಲಿ ಕಾಯಿಸಿದ್ದಕ್ಕೆ ಕ್ಷಮೆಯಿರಲಿ ಎಂದು ರಾಹುಲ್ ಮತದಾರರಲ್ಲಿ ಮನವಿ ಮಾಡಿದರು ಮತ್ತು ಸಿಂಧನೂರಿನ ಕಾಂಗ್ರೆಸ್ ಅಭ್ಯರ್ಥಿ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದರು.

ಸಮಾವೇಶದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement