ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಸತ್‌ನಲ್ಲಿ 'ಕೋಲ್‌'ಹಲ: ಪ್ರಧಾನಿ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

2ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ಮತ್ತು ಎಡರಂಗ ಮಂಗಳವಾರ ನೇರವಾಗಿ ..

Lingaraj Badiger
Updated On : 23 Apr 2013, 2:25 am

ನವದೆಹಲಿ: 2ಜಿ ಸ್ಪೆಕ್ಟ್ರಂ ಹಗರಣ ಮತ್ತು ಕಲ್ಲಿದ್ದಲು ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ಮತ್ತು ಎಡರಂಗ ಮಂಗಳವಾರ ನೇರವಾಗಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಮೇಲೆ ದಾಳಿ ನಡೆಸಿದವು.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ, ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಮತ್ತು ಇತರೆ ಹಗರಣಗಳನ್ನು ಪ್ರಸ್ತಾಪಿಸಿದ ಬಿಜೆಪಿ, ಯುಪಿಎ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತು. ಅಲ್ಲದೆ ಎಲ್ಲ ಹಗರಣಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದರು.

ಸದನ ಆರಂಭವಾಗುವ ಮುನ್ನ ಸಂಸದೀಯ ಮಂಡಳಿಯ ಸಭೆ ನಡೆಸಿದ ಬಿಜೆಪಿ, ಸರಣಿ ಹಗರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಕಾನೂನು ಸಚಿವ ಅಶ್ವಿನಿ ಕುಮಾರ್ ಅವರ ರಾಜಿನಾಮೆ ಒತ್ತಾಯಿಸಲು ನಿರ್ಧರಿಸಿತ್ತು.

ಎಡರಂಗ ಪಕ್ಷಗಳು ಸಹ ಪ್ರಧಾನಿ ರಾಜಿನಾಮೆಗೆ ಒತ್ತಾಯಿಸಿದೆ. ಆದರೆ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದ್ದು, ಬಿಜೆಪಿ ಬೇಡಿಕೆ ಆಧಾರ ರಹಿತವಾದದ್ದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement