ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರು ಸ್ಫೋಟ: ಮತ್ತೆ ಐವರು ಶಂಕಿತರ ಬಂಧನ

ಬೆಂಗಳೂರಿನ ಮಲ್ಲೇಶ್ವರಂನ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬುಧವಾರ ಮತ್ತೆ ಐವರು ಶಂಕಿತ ಉಗ್ರರನ್ನು ಪೊಲೀಸರು..

Lingaraj Badiger
Updated On : 24 Apr 2013, 1:21 am

ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬುಧವಾರ ಮತ್ತೆ ಐವರು ಶಂಕಿತ ಉಗ್ರರನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಇದೀಗ 11ಕ್ಕೆ ಏರಿಕೆಯಾಗಿದೆ.

ಪ್ರಕರಣ ಸಂಬಂಧ ನಿನ್ನೆಯಷ್ಟೇ ಆರು ಜನರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೆ ಐವರನ್ನು ಚೆನ್ನೈನ ತಿರುಮಂಗಲಂ ಮತ್ತು ಮಣ್ಣಡಿ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಚೆನ್ನೈನ ರಹಸ್ಯ ಸ್ಥಳದಲ್ಲಿ ಬಾಂಬ್ ತಯಾರಿಕೆ ಬಗ್ಗೆ ಈ ಶಂಕಿತ ಉಗ್ರರ ವಿಚಾರಣೆ ನಡೆಸುತ್ತಿದ್ದಾರೆ.

ನಿನ್ನೆ ಬಂಧಿಸಲಾದ ಆರು ಶಂಕಿತ ಉಗ್ರರ ಹಾಗೂ ಇಂದು ವಶಕ್ಕೆ ಪಡೆದುಕೊಂಡವರ ಮೊಬೈಲ್‌ಗಳಿಗೆ ಪರಸ್ಪರ ಕರೆಗಳು ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಪ್ರಿಲ್ 17ರಂದು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಬಳಿ ಬಾಂಬ್ ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 16 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು ಈವರೆಗೆ 11 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement