ರಾಮುಲು, ಪೂಜಾ ಗಾಂಧಿಗೆ ನೋಟಿಸ್
ಬಿಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿ ನಟಿ..
ರಾಯಚೂರು: ಬಿಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿ ನಟಿ ಪೂಜಾ ಗಾಂಧಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಸಂಬಂಧ ಇಬ್ಬರಿಗೂ ನೋಟಿಸ್ ಜಾರಿ ಮಾಡಲಾಗಿದೆ.
ಜಿಲ್ಲೆಯ ಹಸ್ಕಿಹಾಳ ಗ್ರಾಮದಲ್ಲಿ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ರಾಮುಲು ಹಾಗೂ ಪೂಜಾ ಗಾಂಧಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಸಂಬಂಧ ಜಿಲ್ಲಾಧಿಕಾರಿ ಉಜ್ವಲ್ ಘೋಷ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ರಾಮುಲು ಅವರು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡಿದ್ದಲ್ಲದೇ, ನೀತಿ ಸಂಹಿತೆ ಉಲ್ಲಂಘಿಸಿ ದೇವಸ್ಥಾನದಲ್ಲಿ ಪ್ರಚಾರ ಮಾಡಿದ್ದಾರೆ.