ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಲ್ಲಿದ್ದಲು ಹಗರಣ: ಸಿಬಿಐಯಿಂದ ಸುಪ್ರೀಂಗೆ ಅಫಿಡವಿಟ್

ಕಲ್ಲಿದ್ದಲು ಗಣಿ ಹಂಚಿಕೆ ಹಗರಣ ಸಂಬಂಧ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿಯ ಅಫಿಡವಿಟ್ ಸಲ್ಲಿಸಿದೆ..

Lingaraj Badiger
Updated On : 26 Apr 2013, 1:42 am

ನವದೆಹಲಿ: ಕಲ್ಲಿದ್ದಲು ಗಣಿ ಹಂಚಿಕೆ ಹಗರಣ ಸಂಬಂಧ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತನಿಖಾ ಪ್ರಗತಿ ವರದಿಯ ಅಫಿಡವಿಟ್ ಸಲ್ಲಿಸಿದೆ.

ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರು ಇಂದು ಸುಪ್ರೀಂ ಕೋರ್ಟ್‌ಗೆ ಎರಡು ಪುಟಗಳ ಅಫಿಡವಿಟ್ ಸಲ್ಲಿಸಿದ್ದು, ಮಾರ್ಚ್ 8ರಂದು ಪ್ರಕರಣದ ತನಿಖಾ ಪ್ರಗತಿ ವರದಿಯ ಕರಡು ಪ್ರತಿಯನ್ನು ಕಾನೂನು ಸಚಿವ ಅಶ್ವಿನಿ ಕುಮಾರ್ ಹಾಗೂ ಪ್ರಧಾನಿ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮತ್ತು ಕಲ್ಲಿದ್ದಲು ಸಚಿವಾಲಯಕ್ಕೂ ಕಳುಹಿಸಿದನ್ನು ಅಫಿಡವಿಟ್‌ನಲ್ಲಿ ಒಪ್ಪಿಕೊಂಡಿದ್ದಾರೆ.

ಆದರೆ ಈಗ ಸಲ್ಲಿಸಿದ ತನಿಖಾ ವರದಿಯ ಮಾಹಿತಿಯನ್ನು ರಾಜಕೀಯ ಪ್ರತಿನಿಧಿಗಳು ಸೇರಿದಂತೆ ಸರ್ಕಾರದ ಯಾವುದೇ ಪ್ರತಿನಿಧಿಯೊಂದಿಗೆ ಹಂಚಿಕೊಂಡಿಲ್ಲ ಎಂದು ರಂಜಿತ್ ಸಿನ್ಹಾ ಅವರು ಕೋರ್ಟ್‌ಗೆ ಸ್ಪಷ್ಟಪಡಿಸಿದ್ದಾರೆ.

ಅಶ್ವಿನಿ ಕುಮಾರ್ ಸೂಚನೆಯಂತೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಮುನ್ನ ಅದರ ಕರಡು ಪ್ರತಿ(ಮಾರ್ಚ್ 8ರ ತನಿಖಾ ವರದಿ)ಯನ್ನು ಪ್ರಧಾನಿ ಸಚಿವಾಲಯಕ್ಕೆ ಮತ್ತು ಕಲ್ಲಿದ್ದಲು ಸಚಿವಾಲಯಕ್ಕೆ ಸಲ್ಲಿಸಿದ್ದೇವೆ ಮತ್ತು ಈ ಬಗ್ಗೆ ಸರ್ಕಾರದ ಇಬ್ಬರು ಜಂಟಿ ಕಾರ್ಯದರ್ಶಿಗಳಿಗೂ ಮಾಹಿತಿ ನೀಡಿರುವುದಾಗಿ ಸಿಬಿಐ ನಿರ್ದೇಶಕರು ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಸಿಬಿಐ ತನಿಖಾ ವರದಿಯನ್ನು ಸರಕಾರವೇ ತಿದ್ದುಪಡಿ ಮಾಡಿಸಿದೆ ಎಂಬ ಬಗ್ಗೆ ಭಾರಿ ಕೋಲಾಹಲವೆದ್ದಿತ್ತು. ಅಲ್ಲದೆ ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿತ್ತು.

ಈ ಮಧ್ಯೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಕೇಂದ್ರ ಕಾನೂನು ಸಚಿವರ ಹಸ್ತಕ್ಷೇಪವನ್ನು ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ ಮತ್ತು ಅಶ್ವಿನಿ ಕುಮಾರ್ ರಾಜಿನಾಮೆಗೆ ಒತ್ತಾಯಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement