ರೆಡ್ಡಿ ಸಹೋದರರಿಂದ ಹಣ ಪಡೆದಿಲ್ಲ: ಸುಷ್ಮಾ
ಬಳ್ಳಾರಿಯ ರೆಡ್ಡಿ ಸಹೋದರರಿಂದ ತಾವು ಹಣ ಪಡೆದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಮಂಗಳೂರು: ಬಳ್ಳಾರಿಯ ರೆಡ್ಡಿ ಸಹೋದರರಿಂದ ತಾವು ಹಣ ಪಡೆದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮಂಗಳೂರಿನಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಹಾಗೂ ರೆಡ್ಡಿ ಸಹೋದರರ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ವರಮಹಾಲಕ್ಷ್ಮೀಯ ಪೂಜೆಗಾಗಿ ಮಾತ್ರ ನಾನು ಬಳ್ಳಾರಿಗೆ ಬರುತ್ತಿದ್ದೆ. ಈ ವೇಳೆ ರೆಡ್ಡಿಗಳಿಂದ ಹಣ ಪಡೆದಿದ್ದೇನೆ ಎನ್ನುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೆಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಂದಿನ ಸರ್ಕಾರ ರಚನೆಯಲ್ಲಿ ಕೆಜೆಪಿ ಪಾತ್ರ ಇರಲ್ಲ ಎಂದು ಹೇಳಿದರು.