ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಈಶ್ವರಪ್ಪ ಅಕ್ರಮ ಆಸ್ತಿ ಗಳಿಕೆ: ಕಾನೂನು ತಜ್ಞರೊಂದಿಗೆ ಚರ್ಚಿಸಿ ಕ್ರಮ; ಸಿಎಂ

ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ..

Lingaraj Badiger
Updated On : 27 Apr 2013, 12:38 pm

ಯಾದಗಿರಿ: ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಭ್ರಷ್ಟರನ್ನು ರಕ್ಷಿಸುತ್ತಿದೆ ಎಂಬ ಕೆಜಿಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಶೆಟ್ಟರ್, ಭ್ರಷ್ಟರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸೋಲಿನ ಭೀತಿಯಲ್ಲಿ ಕೆಜೆಪಿ ಈ ರೀತಿ ಆರೋಪಗಳನ್ನು ಮಾಡುತ್ತಿದೆ ಎಂದು ತಿರುಗೇಟು ನೀಡಿದರು.

ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವ ಶೆಟ್ಟರ್ ಅವರೇ ಭ್ರಷ್ಟರನ್ನು ರಕ್ಷಿಸುತ್ತಿದ್ದಾರೆ ಎಂದು ನಿನ್ನೆ ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದರು. ಆದಾಯ ಮೀರಿದ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರ ಶಿಫಾರಸನ್ನು ಸಿಎಂ ಶೆಟ್ಟರ್ ಅವರು ಬಚ್ಚಿಟ್ಟು ಭ್ರಷ್ಟರನ್ನು ರಕ್ಷಿಸುತ್ತಿದ್ದಾರೆ ಎಂದು ಬಿಎಸ್‌ವೈ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement