ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಸರ್ಕಾರ ಜನತೆಗೆ ದ್ರೋಹ ಮಾಡಿದೆ: ಸೋನಿಯಾ

ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡಿದ್ದು, ಬಿಜೆಪಿ ದುರಾಡಳಿತಕ್ಕೆ ಅಂತ್ಯಹಾಡಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ..

Lingaraj Badiger
Updated On : 27 Apr 2013, 2:34 am

ಚಿಕ್ಕಮಗಳೂರು: ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡಿದ್ದು, ಬಿಜೆಪಿ ದುರಾಡಳಿತಕ್ಕೆ ಅಂತ್ಯಹಾಡಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಹೇಳಿದ್ದಾರೆ.

ಇಂದು ಚಿಕ್ಕಮಗಳೂರಿನ ನೇತಾಜಿ ಸುಭಾಷ್‌ಚಂದ್ರಬೋಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ, ಸೋನಿಯಾ ಎಲ್ಲರಿಗೂ ನನ್ನ ನಮಸ್ಕಾರ ಎಂದು ಕನ್ನಡದಲ್ಲಿ ಹೇಳುವ ಮೂಲಕ ತಮ್ಮ ಚುನಾವಣಾ ಪ್ರಚಾರ ಭಾಷಣ ಆರಂಭಿಸಿದರು.

ರಾಜ್ಯದಲ್ಲಿ ಈಗ ಬದಲಾವಣೆಯ ಸಮಯ ಬಂದಿದೆ. ಕಾಂಗ್ರೆಸ್‌ನ ಹಸ್ತದ ಗುರುತಿಗೆ ಈ ಬಾರಿ ನಿಮ್ಮ ಮತ ನೀಡಿ, ನಾವು ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡ್ತೇವೆ ಎಂದು ಸೋನಿಯಾ ಭರವಸೆ ನೀಡಿದರು.

ನಾನು ಚಿಕ್ಕಮಗಳೂರಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಕಾಂಗ್ರೆಸ್‌ನ ನೆರವಿನ ಹಸ್ತ ನೀಡಲು ನಾನು ಇಲ್ಲಿಗೆ ಬಂದಿರುವೆ. ಇದು ವಿಭಿನ್ನ ಭಾಷೆ, ಸಂಸ್ಕೃತಿಯ ನಾಡಾಗಿದೆ ಎಂದರು.

ಇದೇ ವೇಳೆ ಜನರ ಕಲ್ಯಾಣಕ್ಕಾಗಿ ಯುಪಿಎ ಸರ್ಕಾರ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದೆ ಎಂದು ಸೋನಿಯಾ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement