ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಳ್ಳಾರಿಯಲ್ಲಿ 'ಕೈ' ಪರ ಅಜರುದ್ದೀನ್ ಬ್ಯಾಟಿಂಗ್

Srinivasa Murthy VN
Updated On : 28 Apr 2013, 4:47 am

ಬಳ್ಳಾರಿ: ಮಾಜಿ ಕ್ರಿಕೆಟಿಗ ಮತ್ತು ಸಂಸದ ಮಹಮದ್ ಅಜರುದ್ದೀನ್ ಅವರು ಭಾನುವಾರ ಬಳ್ಳಾರಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಿಕೆಟಿಗ ಅಜರುದ್ದೀನ್ ಅವರು ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಹೊಸಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ವಹಾಬ್ ಪರ ಮತಯಾಚನೆ ಮಾಡಿದ ಅವರು ಬಿಜೆಪಿಯ ದುರಾಡಳಿತವನ್ನು ಖಂಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸಾರ್ವಜನಿಕರ ಜೀವನ ಅಸ್ತವ್ಯಸ್ಥವಾಗಿದೆ. ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಅಜರುದ್ದೀನ್ ಜನತೆಯನ್ನು ಕೋರಿದರು.

ಪ್ರಚಾರದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಜರ್, ಕ್ರಿಕೆಟ್‌ಗೂ ರಾಜಕೀಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ನಾನು ಇಲ್ಲಿ ನಾಯಕನಲ್ಲ. ನಮ್ಮ ನಾಯಕರು ಮೇಡಂ ದೆಹಲಿಯಲ್ಲಿದ್ದಾರೆ. ಹೈಕಮಾಂಡ್ ಹೇಳುವ ಕ್ಷೇತ್ರಗಳಿಗೆ ತೆರಳಿ ನಾನು ಪ್ರಚಾರ ನಡೆಸುತ್ತೇನೆ. ಇದೇ ಮೊದಲ ಬಾರಿಗೆ ನಾನು ಕರ್ನಾಟಕಕ್ಕೆ ಆಗಮಿಸಿ ಪ್ರಚಾರ ನಡೆಸುತ್ತಿದ್ದೇನೆ ಎಂದು ಅಜರುದ್ದೀನ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement