ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೆಆರ್ ಪೇಟೆಯಲ್ಲಿ 50 ಲಕ್ಷ ನಗದು ವಶ

Srinivasa Murthy VN
Updated On : 29 Apr 2013, 5:59 am

ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರುಪಾಯಿಗಳನ್ನು ಮಂಡ್ಯದ ಕೆಆರ್ ಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಂದು ಬೆಳಗ್ಗೆ ಬಾರಿ ಮೊತ್ತದ ಹಣವನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಮಾಹಿತಿ ಪಡೆದ ಕೆಆರ್ ಪೇಟೆ ಪೊಲೀಸರು, ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ದಾಖಲೆ ರಹಿತ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಅವರು ಈ ಸಂಬಂಧ ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಇದೇ ಮೊದಲ ಬಾರಿಗೆ ಇಷ್ಟೊಂದು ಮೊತ್ತದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಸಿಕೊಂಡಿರುವ ಕೆಆರ್ ಪೇಟೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಮನಸೆಳೆಯಲು ಅಭ್ಯರ್ಥಿಗಳು ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಮೇಲೆ ಕಣ್ಣುಹಾಕಿರುವ ಚುನಾವಣಾಧಿಕಾರಿಗಳು ಅವರ ಪ್ರಯತ್ನಗಳನ್ನು ವಿಫಲಗೊಳಿಸುತ್ತಿದ್ದಾರೆ. ಆದರೂ ಸಹ ಚುನಾವಣಾ ಅಕ್ರಮವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement