ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಈಶ್ವರಪ್ಪ ಹೆಲಿಕಾಪ್ಟರ್‌ನಲ್ಲಿ ಹಣ ಪತ್ತೆ, ಪ್ರಕರಣ ದಾಖಲು

ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಹೆಲಿಕಾಪ್ಟರ್‌ನಲ್ಲಿ 61.400 ರುಪಾಯಿ ನಗದು..

Lingaraj Badiger
Updated On : 30 Apr 2013, 1:16 am

ಯಾದಗಿರಿ: ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಹೆಲಿಕಾಪ್ಟರ್‌ನಲ್ಲಿ 61.400 ರುಪಾಯಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಅವರ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲೆಯ ಗುರುಮಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಿರೀಶ್ ಮಟ್ಟಣ್ಣವರ್ ಪರ ಪ್ರಚಾರ ಮಾಡಲು ಈಶ್ವರಪ್ಪ ಅವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಈ ವೇಳೆ ಗುರುಮಟ್ಕಲ್ ಪೊಲೀಸರು ಅವರ ಹೆಲಿಕಾಪ್ಟರ್‌ನ್ನು ಪರಿಶೀಲಿಸಿ, ಅದರಲ್ಲಿದ್ದ 61.400 ರುಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ಸೂಕ್ತ ದಾಖಲೆಗಳಿಲ್ಲದ ಕಾರಣ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಈ ಸಂಬಂಧ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪ್ರಕಣದ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement