ಮೇ 25ಕ್ಕೆ ಪಿರಿಯಾಪಟ್ಟಣ ಚುನಾವಣೆ ಮುಂದೂಡಿಕೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನರಾಗಿರುವ ಹಿನ್ನೆಲೆ ಆ ಕ್ಷೇತ್ರದ ಚುನಾವಣೆಯನ್ನು ಮೇ 25ಕ್ಕೆ ...
ಮೈಸೂರು: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನರಾಗಿರುವ ಹಿನ್ನೆಲೆ ಆ ಕ್ಷೇತ್ರದ ಚುನಾವಣೆಯನ್ನು ಮೇ 25ಕ್ಕೆ ಚುನಾವಣಾ ಆಯೋಗ ಮುಂದೂಡಿದೆ.
ಮೇ 8 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಷ್ಟರೊಳಗಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಚುನಾವಣಾ ಮತ ಎಣಿಕೆ ಪ್ರಕ್ರಿಯೆಯನ್ನು ಮೇ 28ಕ್ಕೆ ನಿಗದಿ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.
ಪಿರಿಯಾಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಣ್ಣಮೊಗೇಗೌಡ ಅವರ ನಿಧನ ಹಿನ್ನಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಪಿರಿಯಾಪಟ್ಟಣ ಬಿಜೆಪಿ ಅಭ್ಯರ್ಥಿ ಸಣ್ಣಮೊಗೇಗೌಡ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಇಂದು ಅವರ ಅಂತಿಮ ಕ್ರಿಯಾವಿಧಿ ವಿಧಾನಗಳು ಅವರ ಸ್ವಗ್ರಾಮದಲ್ಲಿ ನಡೆಯಲಿದೆ.