ಉತ್ತರ ಭಾರತದಲ್ಲಿ ಪ್ರಬಲ ಭೂಕಂಪನ
ನವದೆಹಲಿ: ಉತ್ತರ ಭಾರತದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ರಷ್ಟು ತೀವ್ರತೆ ದಾಖಲಾಗಿದೆ.
ಉತ್ತರ ಭಾರತದ ರಾಜ್ಯಗಳಾದ ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಇಂಡೋ-ಪಾಕ್ ಗಡಿ ಪ್ರದೇಶ ಭದರ್‌ವ್ಹಾದ 17 ಕಿಮೀ ವ್ಯಾಪ್ತಿ ಮತ್ತು ಕಿಶ್ತ್‌ವಾರ್‌ನ 23 ಕಿಮೀ ವ್ಯಾಪ್ತಿಯಲ್ಲಿ ಭೂಕಂಪನ ಸಂಭವಿಸಿದೆ.
ಇಂದು ಮಧ್ಯಾಹ್ನ 12:27ರ ಸಮಯದಲ್ಲಿ ಸುಮಾರು 10 ಸೆಕೆಂಡುಗಳ ಕಾಲ ಭೂಮಿ ನಡುಗಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವುಗಳಾಗಿರುವ ಕುರಿತು ವರದಿಯಾಗಿಲ್ಲ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳು ಹೊಂದಿಕೊಂಡಿರುವ ಗಡಿ ಪ್ರದೇಶ ಭೂಕಂಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದೆ