ಭ್ರಷ್ಟಾಚಾರದಲ್ಲಿ ಬಿಜೆಪಿ ಚಾಂಪಿಯನ್: ರಾಹುಲ್ ಗಾಂಧಿ
ಬೆಳಗಾವಿ: ಭ್ರಷ್ಟಾಚಾರದಲ್ಲಿ ಬಿಜೆಪಿ ಚಾಂಪಿಯನ್ ಆಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಪ್ರಚಾರಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 'ಭ್ರಷ್ಟಾಚಾರದಲ್ಲಿ ಬಿಜೆಪಿ ಚಾಂಪಿಯನ್ ಆಗಿದ್ದು, ನಾವು 50 ವರ್ಷದಲ್ಲಿ ಮಾಡಲಾಗದ್ದನ್ನು ಬಿಜೆಪಿ ಕೇವಲ 5 ವರ್ಷದಲ್ಲಿ ಮಾಡಿದೆ. ರಾಜ್ಯದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯೂ ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿರಲಿಲ್ಲ. ಆದರೆ ಈ ದಾಖಲೆಯನ್ನು ಸಹ ಬಿಜೆಪಿ ಮತ್ತು ಯಡಿಯೂರಪ್ಪ ಅವರು ಮುರಿದುಹಾಕಿದ್ದಾರೆ'.
'ಗಣಿಗಾರಿಕೆ ಹೆಸರಲ್ಲಿ ಬಳ್ಳಾರಿ ಗಣಿಧಣಿಗಳ ದೇಶದ ಅಪಾರ ಸಂಪತನ್ನು ಲೂಟಿ ಮಾಡಿದ್ದಾರೆ. ಇಂತಹ ಬಳ್ಳಾರಿ ಸೋದರರೊಂದಿಗೆ ಬಿಜೆಪಿಗೆ ನಂಟಿದೆ ಎಂದು ರಾಹುಲ್ ಗಾಂಧಿ ಹೇಳಿದರು.