ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಮಹಾ' ವಿಪಕ್ಷ ನಾಯಕನ ಮಗನ ಆತ್ಮಹತ್ಯೆ

Srinivasa Murthy VN
Updated On : 1 May 2013, 6:53 am

ಮುಂಬೈ: ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಏಕನಾಥ್ ಖಡಸೆ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ಏಕನಾಥ್ ಖಡಸೆ ಅವರ ಪುತ್ರ ನಿಖಿಲ್ ಖಡಸೆ  ಅವರು ಜಲಂಗಾವ್ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಂದೆಯ ರಿವಾಲ್ವರ್ ಮೂಲಕ ತಲೆಗೆ ಗುಂಡು ಹಾರಿಸಿಕೊಂಡಿದ್ದ ನಿಖಿಲ್ ಖಡಸೆ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ನಿಖಿಲ್ ಖಡಸೆ ಅವರನ್ನು ತುರ್ತುನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಜಲಂಗಾವ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement