ರಾಜ್ಯದಲ್ಲಿ ಮೇ 3ರಿಂದ ಮದ್ಯ ಮಾರಾಟ ನಿಷೇಧ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮೇ3ರಿಂದ ಮದ್ಯ ಮಾರಟವನ್ನು ನಿಷೇಧ ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಮೇ 5ರಂದು ವಿಧಾನಸಭೆ ಚುನಾವಣೆ ನಡೆಯುವುದರಿಂದ ರಾಜ್ಯದೆಲ್ಲೆಡೆ ಮೇ 3ರಿಂದ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಮೇ 3ರಿಂದ ಸಂಜೆ 5 ಗಂಟೆಯ ನಂತರ ಮದ್ಯ ಮಾರಾಟ ಮಾಡುವವರ ಮೇಲೆ ಮತ್ತು ಮದ್ಯ ಸಾಗಾಟ ಮಾಡುವವರ ಮೇಲೆ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ಚುನಾವಣೆ ಮುಗಿಯುವವರೆಗೆ ಅಂದರೆ ಮೇ6 ರವರೆಗೂ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.
ಅಂತೆಯೇ ರಾಜ್ಯದಲ್ಲಿ ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ. ಚುನಾವಣೆಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಿದ್ದೇವೆ ಎಂದು ಅನಿಲ್ ಕುಮಾರ್ ಝಾ ತಿಳಿಸಿದರು.