ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ನೇಹಿತನ ರಕ್ಷಿಸಲು ಹೋದ ನಾಲ್ವರ ದುರ್ಮರಣ

Vishwanath S
Updated On : 1 May 2013, 4:55 am

ಧರ್ಮಪುರಿ: ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲು ಹೋಗಿ 4 ಮಂದಿ ಜಲಸಮಾಧಿಯಾಗಿರುವ ಧಾರುಣ ಘಟನೆ ಹೊಗೇನಕಲ್‌ನಲ್ಲಿ ಬುಧವಾರ ಸಂಭವಿಸಿದೆ.

ಪ್ರವಾಸಕ್ಕೆಂದು ಹೊಗೇನಕಲ್‌ಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರು ಬೆಂಗಳೂರಿನ ಕೋರಮಂಗಲ ನಿವಾಸಿಗಳಾದ ನಂದ, ನಾಗೇಶ್, ರಾಜು, ವಿಜಯ್ ಎಂದು ತಿಳಿದುಬಂದಿದೆ. ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ಇಂದು ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಂಪನಿಗೆ ರಜೆ ಇರುವುದರಿಂದ 14 ಜನರ ತಂಡ 7 ಬೈಕ್‌ನಲ್ಲಿ ಹೊಗೇನಕಲ್‌ಗೆ ತೆರಳಿದ್ದರು.

ಧರ್ಮಪುರಿ ಜಿಲ್ಲೆಯ ಹೊಗೇನೆಕಲ್ ಸಮೀಪದ ಹೊಳೆಯಲ್ಲಿ ಸ್ನಾನ ಮಾಡಲೆಂದು ಇಳಿದಿದ್ದಾರೆ. ಆ ಸಂದರ್ಭದಲ್ಲಿ ಜಗದೀಶ್ ಎಂಬುವರು ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಸ್ನೇಹಿತರು, ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಹೊಳೆಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದರಿಂದ 4 ಮಂದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಜಗದೀಶ್ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಜಗದೀಶ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹೊಗೇನಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.








Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement