ಬೆಳಗಾವಿಯಲ್ಲಿ 'ಸಿಲ್ಕ್' ಪ್ರದರ್ಶನಕ್ಕೆ ವಿರೋಧ
ಇಂದು ರಾಜ್ಯಾದ್ಯಂತ ತೆರೆ ಕಂಡಿರುವ ಪಾಕಿಸ್ತಾನದ ನಟಿ ವೀಣಾ ಮಲ್ಲಿಕ್ ಹಾಗೂ ಅಕ್ಷಯ್ ಅಭಿನಯದ ..
ಬೆಳಗಾವಿ: ಇಂದು ರಾಜ್ಯಾದ್ಯಂತ ತೆರೆ ಕಂಡಿರುವ ಪಾಕಿಸ್ತಾನದ ನಟಿ ವೀಣಾ ಮಲ್ಲಿಕ್ ಹಾಗೂ ಅಕ್ಷಯ್ ಅಭಿನಯದ 'ಸಿಲ್ಕ್' ಚಿತ್ರ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.
ಚಿತ್ರದಲ್ಲಿ ಪಾಕ್ ನಟಿ ವೀಣಾ ಮಲ್ಲಿಕ್ ಅಭಿನಯಿಸಿದ್ದಕ್ಕಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಕಾರ್ಯಕರ್ತರು, ನಗರದ ಸಂತೋಷ್ ಹಾಗೂ ನಿರ್ಮಲ್ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರ ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ಸಹ ನಡೆಸಿದರು.