ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭೆ ಉಪ ಸಮರ: ಜೆಡಿಎಸ್‌ನಿಂದ ಅನಿತಾ, 'ಕೈ'ಯಿಂದ ಡಿ.ಕೆ.ಸುರೇಶ್ ಖಚಿತ

ಲೋಕಸಭೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ..

Lingaraj Badiger
Updated On : 2 Aug 2013, 1:23 am

ಬೆಂಗಳೂರು: ಲೋಕಸಭೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಹಾಗೂ ಜೆಡಿಎಸ್‌ನಿಂದ ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಅನಿತಾ ಕುಮಾರಸ್ವಾಮಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ಸಹೋದರ ಕಣ್ಣಕ್ಕಿಳಿಯುವುದು ಖಚಿತವಾಗುತ್ತಿದ್ದಂತೆ ಕ್ರಿಯಾಶೀಲರಾಗಿರುವ ಡಿ.ಕೆ.ಶಿವಕುಮಾರ್ ಅವರು, ಇಂದು ಮಧ್ಯಾಹ್ನ ಆ ಭಾಗದ ಮತ್ತೊರ್ವ ಪ್ರಭಾವಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ರಹಸ್ಯ ಸ್ಥಳದಲ್ಲಿ ಭೇಟಿ ಮಾಡಿ, ಬೆಂಬಲ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement