ಹುಬ್ಬಳ್ಳಿಯಲ್ಲಿ ಅಸ್ವಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ..
ಹುಬ್ಬಳ್ಳಿ: ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ರಾಜ್ಯ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಶುಕ್ರವಾರ ಸಾಕ್ಷಿಯಾಗಿದೆ.
ಹುಬ್ಬಳ್ಳಿಯ ಕೇಶವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ರೇಲ್ವೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮಹಿಳೆ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ಮಹಿಳೆಯ ಅಳಿಯ ಸೇರಿದಂತೆ ವಿನೋಬನಗರದ 11 ದುಷ್ಕರ್ಮಿಗಳು ರೇಲ್ವೆ ಕ್ವಾಟರ್ಸ್‌ನಲ್ಲಿ ವಾಸವಿದ್ದ ಅಸ್ವಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
11 ಜನರ ಕಾಮುಕರ ತಂಡ ಅತ್ಯಾಚಾರದ ಬಳಿಕ ಮನೆಯಲ್ಲಿದ್ದ ಹಣ ಮತ್ತು ಒಡವೆಗಳನ್ನು ದೋಚಿಕೊಂಡು ಹೋಗಿದ್ದಾರೆ. ಅತ್ಯಾಚಾರದ ವಿಡಿಯೋ ಮಾಡಿಕೊಂಡಿರುವ ಕಾಮುಕರು, ಪೊಲೀಸರಿಗೆ ವಿಷಯ ತಿಳಿಸಿದರೆ ಅದನ್ನು ಇಂಟರ್ನೆಟ್ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೇಶವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.