ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಮಪತ್ರ ಸಲ್ಲಿಕೆ ವೇಳೆ ಹೃದಯಾಘಾತ: ನಟಿ ರಮ್ಯ ಸಾಕು ತಂದೆ ಆರ್.ಟಿ.ನಾರಾಯಣ್ ನಿಧನ

ಮಂಡ್ಯ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸ್ಯಾಂಡಲ್‌ವುಡ್ ನಟಿ ರಮ್ಯ ಅವರ..

Lingaraj Badiger
Updated On : 3 Aug 2013, 5:07 am

ಮಂಡ್ಯ: ಮಂಡ್ಯ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸ್ಯಾಂಡಲ್‌ವುಡ್ ನಟಿ ರಮ್ಯ ಅವರ ಸಾಕು ತಂದೆ ಆರ್.ಟಿ.ನಾರಾಯಣ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಅಂಬರೀಷ್ ಅವರೊಂದಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಮ್ಯ ನಾಮಪತ್ರ ಸಲ್ಲಿಸುವ ವೇಳೆ, ಜೊತೆಯಲ್ಲಿದ್ದ ಅವರ ಸಾಕು ತಂದೆ ನಾರಾಯಣ್ ಅವರು ಕುಸಿದು ಬಿದ್ದರು. ಕೂಡಲೇ ಅಂಬರೀಷ್ ಅವರ ಕಾರಿನಲ್ಲಿ ನಾರಾಯಣ್ ಅವರನ್ನು ಮಂಡ್ಯದಲ್ಲಿರುವ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮ್ಯಾ ಸಾಕು ತಂದೆ ಕೊನೆಯುಸಿರೆಳೆದರು.

ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ರಮ್ಯ ಲೋಕಸಭೆ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement