ಭಾರತೀಯ ರಾಯಭಾರ ಕಚೇರಿ ಮೇಲೆ ಆತ್ಮಾಹುತಿ ದಾಳಿ: 9 ಸಾವು
ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ಶನಿವಾರ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ಮಾಡಿದ್ದು,..
ಕಾಬುಲ್: ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ಶನಿವಾರ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ಮಾಡಿದ್ದು, ದಾಳಿಯಲ್ಲಿ 9 ಮಂದಿ ಮೃತಪಟ್ಟು, 24ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಜಲಾಲಾಬಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಗುರುಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ಸ್ಫೋಟಿಸಿ, ಗುಂಡಿನ ದಾಳೆ ನಡೆಸಿದ್ದಾರೆ. ಆದರೆ ಎಲ್ಲ ಭಾರತೀಯ ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
'ಜಲಾಲಾಬಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದೆ. ನಾವು ಭಾರತೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು' ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಸಯೀದ್ ಅಕ್ಬರುದ್ದೀನ್ ಅವರು ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.