ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಿಕ್ಷಿತ ಸಂಸದ, ಶಾಸಕರ ಅನರ್ಹತೆ: ಸುಪ್ರೀಂ ತೀರ್ಪು ಪ್ರಶ್ನಿಸಿ ಪುನರ್ ಪರಿಶೀಲನಾ ಅರ್ಜಿ

Vishwanath S
Updated On : 3 Aug 2013, 7:46 am

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಸಂಸದ, ಶಾಸಕರ ಅನರ್ಹತೆ ಮತ್ತು ಬಂಧಿತ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪುಗಳನ್ನು ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿವೆ.

ಜುಲೈ 10ರಂದು ಸುಪ್ರೀಂಕೋರ್ಟ್ ನೀಡಿದ್ದ ಎರಡು ತೀರ್ಪುಗಳನ್ನು ಪುನರ್ ಪರಿಶೀಲಿಸುವಂತೆ ಕೋರಿ ಹರ್ಯಾಣ ಸ್ವತಂತ್ರ ಪಕ್ಷದ ಅಧ್ಯಕ್ಷ ರಮೇಶ್ ದಯಾಲ್ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.

ಪೊಲೀಸರ ವಶದಲ್ಲಿರುವ ಸಂಸದರು ಹಾಗೂ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರಿಂದಾಗಿ ವಿಚಾರಣಾಧೀನ ಕೈದಿಗಳು ಜೈಲಿನಲ್ಲೇ ಇದ್ದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಕಡಿವಾಣವಾಕಿತ್ತು.

ಮೇಲಿನ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂಬ ನೆಲೆಯಲ್ಲಿ ಶಿಕ್ಷೆಗೆ ಒಳಗಾದ ಶಾಸನಕರನ್ನು ಅನರ್ಹಗೊಳಿಸದಂತೆ ಜನತಾ ಪ್ರಾತಿನಿಧ್ಯ ಕಾಯ್ದೆಯಲ್ಲಿ ರಕ್ಷಣೆ ಒದಗಿಸಿದ್ದ ವಿಧಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.

ಸುಪ್ರೀಂ ತೀರ್ಪಿನ ವಿರುದ್ದ ರಾಜಕಾರಣಿಗಳು ಪಕ್ಷ ಭೇದ ಮರೆತು ವಿರೋಧಿಸಿದ್ದರು. ಕೇಂದ್ರ ಸರ್ಕಾರ ಕೂಡಾ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿತ್ತು. ಅಲ್ಲದೆ ಹಾಲಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಶಾಸಕಾಂಗ ಪರಿಹಾರ ಕಂಡುಕೊಳ್ಳುವ ಬಗ್ಗೆ ಪರಿಶೀಲಿಸುವುದಾಗಿಯೂ ಕೇಂದ್ರ ಸರ್ಕಾರ ಹೇಳಿತ್ತು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement