ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳನ್ನು ಶಿಕ್ಷಿಸಿ: ಪ್ರಧಾನಿಗೆ ಜಯಾ ಪತ್ರ

ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಧಾನಿಯವರ ವಿಶೇಷ ಭದ್ರತಾ ಪಡೆ ಅಧಿಕಾರಿಗಳ...

Vishwanath S
Updated On : 4 Aug 2013, 3:42 am

ಚೆನ್ನೈ: ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಧಾನಿಯವರ ವಿಶೇಷ ಭದ್ರತಾ ಪಡೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ತಮಿಳುನಾಡು ಮುಖ್ಯಮಂತ್ರಿ ಜಯಾ ಲಲಿತಾ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಆಗಸ್ಟ್ 3 ರಂದು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಜಯಾ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಕೆ. ರಾಮಾನುಜಂ ಅವರೊಂದಿಗೆ ಅಧಿಕಾರಿಗಳು ಅಸಭ್ಯವಾಗಿ ವರ್ತಿಸಿದ್ದಾರೆ . ಹೀಗಾಗಿ ಅವರನ್ನು ಅಧಿಕಾರದಿಂದ ವಜಾಗೊಳಿಸುವಂತೆ ಮನವಿ ಮಾಡಿದ್ದಾರೆ. ಅವರ ಬದಲು ಬೇರೆ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು, ಮುಂದೆ ಈ ರೀತಿಯ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ತಿರುಮಾಯಾಂನಲ್ಲಿ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಅವರು ಶುಕ್ರವಾರ ತಮಿಳುನಾಡಿಗೆ ಆಗಮಿಸಿದ್ದರು. ಪ್ರಧಾನಿ ಅವರನ್ನು ಬರಮಾಡಿಕೊಳ್ಳಲು ಕ್ಯಾಬಿನೇಟ್ ಸಚಿವರಾದ ವಿತ್ತ ಸಚಿವ ಓ. ಪರಮೇಶ್ವರನ್ ಸೇರಿದಂತೆ ರಾಜ್ಯದ ಪೊಲೀಸ್ ಅಧಿಕಾರಿಗಳನ್ನು ತಿರುಚಿರಪಲ್ಲಿ ವಿಮಾನ ನಿಲ್ದಾಣಕ್ಕೆ ಜಯಲಲಿತ ಅವರು ಕಳಿಸಿದ್ದರು. ಈ ವೇಳೆ, ಪ್ರಧಾನಿ ಅವರ ವಿಶೇಷ ಭದ್ರತಾ ಪಡೆ ಅಧಿಕಾರಿಗಳು ಡಿಜಿಪಿ ಕೆ. ರಾಮಾನುಜಂ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಜಯಾ ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement