ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐಎಎಸ್ ಅಧಿಕಾರಿ ಅಮಾನತು: ವರದಿ ನೀಡುವಂತೆ ಉ.ಪ್ರ ಸರ್ಕಾರಕ್ಕೆ ಕೇಂದ್ರ ಪತ್ರ

ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗಪಾಲ್ ಅಮಾನತು ಬಗ್ಗೆ ವರದಿ ನೀಡುವಂತೆ ಸಮಾಜವಾದಿ ಪಕ್ಷದ...

Vishwanath S
Updated On : 4 Aug 2013, 7:08 am

ನವದೆಹಲಿ: ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗಪಾಲ್ ಅಮಾನತು ಬಗ್ಗೆ ವರದಿ ನೀಡುವಂತೆ ಸಮಾಜವಾದಿ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಯಮುನಾ ನದಿ ತೀರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ಮುಂದಾದ ದುರ್ಗಾಶಕ್ತಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಅಮಾನತುಗೊಳಿಸಿರುವುದರ ವರದಿ ನೀಡುವಂತೆ ತಿಳಿಸಿದೆ.

ಐಎಎಸ್ ಅಧಿಕಾರಿಯಾಗಿರುವ ದುರ್ಗಾಶಕ್ತಿ ಅವರನ್ನು ಅನುಚಿತವಾಗಿ ನಡೆಸಿಕೊಳ್ಳಬಾರದು ಎಂಬುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶನಿವಾರ ಪತ್ರ ಬರೆದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಐಎಎಸ್ ಚೌಕಟ್ಟಿನ ಆಡಳಿತಾತ್ಮಕ ಇಲಾಖೆಯು ಸಿಬ್ಬಂದಿ ಸಚಿವಾಲಯದ ಹೊಣೆವಹಿಸಿರುವ ಪ್ರಧಾನಿ ಅವರ ಕಾರ್ಯವ್ಯಾಪ್ತಿಗೆ ಬರುತ್ತದೆ. ಹೀಗಾಗಿ ದುರ್ಗಾಶಕ್ತಿ ಅವರ ಅಮಾನತು ಕುರಿತಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಈ ವಿಚಾರದಲ್ಲಿ ದಿಢೀರ್ ಕ್ರಮಕೈಗೊಂಡಿದ್ದು, ಅಮಾನತಿನ ವರದಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ವಿರುದ್ಧ ದುರ್ಗಾಶಕ್ತಿ ಕ್ರಮಕ್ಕೆ ಮುಂದಾಗಿದ್ದರು. ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಜುಲೈ 27 ರಂದು ದುರ್ಗಾ ಅವರನ್ನು ಅಮಾನತುಗೊಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement