ಶಸ್ತ್ರ ಚಿಕಿತ್ಸೆಗೆ ಒಳಗಾದ ಕೇಂದ್ರ ಗೃಹ ಮಂತ್ರಿ ಶಿಂಧೆ
ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೇಂದ್ರ ಗೃಹ ಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು ಭಾನುವಾರ ಶಸ್ತ್ರ ....
ಮುಂಬೈ: ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೇಂದ್ರ ಗೃಹ ಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು ಭಾನುವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
71 ವರ್ಷದ ಕಾಂಗ್ರೆಸ್ ನಾಯಕ ಶಿಂಧೆ ಕಳೆದ ರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಇಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಇನ್ನೇರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆಗೊಳಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಶಿಂಧೆ ಅವರು ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಯಾವುದೇ ಅಪಾಯವಿಲ್ಲ. ಅವರು ಸಂಸತ್ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಶಿಂಧೆ ಅವರ ಪುತ್ರಿ ಹಾಗೂ ಕಾಂಗ್ರೆಸ್ ಶಾಸಕಿ ಪ್ರಣತಿ ತಿಳಿಸಿದ್ದಾರೆ.