ಕೇರಳ: ಗುಡ್ಡ ಕುಸಿತ 11 ಮಂದಿ ಸಾವು
ಕೊಚ್ಚಿ: ದೇವರ ನಾಡಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸೋಮವಾರ ಗುಡ್ಡವೊಂದು ಕುಸಿದು ಬಿದ್ದು 11 ಮಂದಿ ಸಾವನ್ನಪ್ಪಿದ್ದಾರೆ.
ಕೇರಳದ ಇಡುಕ್ಕಿ ಎಂಬಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.
ಅತಿಯಾದ ಮಳೆಯಿಂದಾಗಿ ಪೆರೆಯಾರ್ ನದಿ ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಕೊಚ್ಚಿ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ಹೀಗಾಗೀ ವಿಮಾನಗಳ ಹಾರಾಟವನ್ನು ತಾತ್ಕಾಲಿಕಾವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಡಬಿಡದೆ ಸುರಿಯುತ್ತಿರುವುದರಿಂದ ಮಳೆಯಿಂದಾಗಿ ಸಮುದ್ರದ ಅಲೆಗಳ ರಭಸ ಹೆಚ್ಚಾಗಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.