ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶತ್ರುಘ್ನ ಸಿನ್ಹಾಗೆ ಜೆಡಿಯುನಿಂದ ಆಹ್ವಾನ

ಬಾಲಿವುಡ್ ಹಿರಿಯ ನಟ ಹಾಗೂ ಭಾರತೀಯ ಜನತಾ ಪಕ್ಷದ(ಬಿಜೆಪಿ) ಮುಖಂಡ ಶತ್ರುಘ್ನಾ ಸಿನ್ಹಾ ಅವರನ್ನು ಜೆಡಿಯು ಪಕ್ಷ ಸೇರ್ಪಡೆಗೊಳ್ಳಲು...

Mainashree
Updated On : 5 Aug 2013, 2:00 am

ನವದೆಹಲಿ: ಬಾಲಿವುಡ್ ಹಿರಿಯ ನಟ ಹಾಗೂ ಭಾರತೀಯ ಜನತಾ ಪಕ್ಷದ(ಬಿಜೆಪಿ) ಮುಖಂಡ ಶತ್ರುಘ್ನಾ ಸಿನ್ಹಾ ಅವರನ್ನು ಜನತಾ ದಳ-ಸಂಯುಕ್ತ(ಜೆಡಿಯು) ಪಕ್ಷ ಸೇರ್ಪಡೆಗೊಳ್ಳಲು ಆಹ್ವಾನಿಸಲಾಗಿದೆ.

ಪಕ್ಷದ ಪ್ರತಿಷ್ಠಿತ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಶತ್ರಘ್ನ ಸಿನ್ಹಾ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ನಾಯಕರು, ವಿವಾದಾತ್ಮಕ ಹೇಳಿಕೆ ನೀಡುವುದು ಹಾಗೂ ಪಕ್ಷದ ನಾಯಕರ ವಿರುದ್ಧ ಮನಬಂದಂತೆ ಮಾತುಗಳನ್ನಾಡುವುದನ್ನು ನಿಲ್ಲಿಸಬೇಕು ಎಂದು ಸಿನ್ಹಾ ಅವರಿಗೆ ಎಚ್ಚರಿಸಿದ್ದರು.

ಇದರ ಬೆನ್ನಲ್ಲೇ ಇತ್ತ ಜೆಡಿಯು ಪಕ್ಷ, ಸಿನ್ಹಾ ಅವರು ಬಿಜೆಪಿ ತೊರೆದು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾದರೆ ಅವರನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದೆ.

ಸಿನ್ಹಾ ಅವರು ಯಾವುದೇ ಸಮಯದಲ್ಲಿ ಬೇಕಾದರೂ ಬಂದು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳಬಹುದು ಎಂದು ಜೆಡಿಯು ವಕ್ತಾರ ಸಂಜಯ್ ಸಿಂಗ್ ಹೇಳಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ಅಭ್ಯರ್ಥಿಗೆ ಸೂಕ್ತ ವ್ಯಕ್ತಿ. ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯಗಳನ್ನು ದೂರ ಮಾಡಿ ಮತ್ತೆ ಮೈತ್ರಿಯಾಗಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದರು.

ನಿತೀಶ್ ಕುಮಾರ್ ಅವರು ಪ್ರಧಾನಿ ಅಭ್ಯರ್ಥಿಗೆ ಸೂಕ್ತ ವ್ಯಕ್ತಿ ಎಂದು ಹೇಳಿಕೆ ನೀಡುವ ಮೂಲಕ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಬಾವುಟ ಹಾರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

ಇದಕ್ಕೆ ವಿಷಾಧ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಸಿ.ಪಿ ಠಾಕೂರ್, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ವಿರುದ್ಧ ಬಿಜೆಪಿಯಲ್ಲಿ ಜಗಳ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.

ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿದ ಶತ್ರುಘ್ನ ಸಿನ್ಹಾ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಹಾಗೂ ವಿವಾದವನ್ನು ಸೃಷ್ಟಿಸುವಂತಹ ಹೇಳಿಕೆಯನ್ನು ಯಾರೇ ನೀಡಿದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ ಸಿ.ಪಿ ಠಾಕೂರ್ ಹೇಳಿದ್ದರು.

ಸಿನ್ಹಾ ಅವರು ಬಿಜೆಪಿ ಪಕ್ಷವನ್ನು ತೊರೆಯಲು ಸಿದ್ಧರಿದ್ದರೆ ಅವರನ್ನು ಯಾರು ತಡೆಯುವುದಿಲ್ಲ. ಸಿನ್ಹಾ ಅವರು ಇಲ್ಲದಿದ್ದರೆ ಪಕ್ಷಕ್ಕೆ ಯಾವುದೇ ನಷ್ಟ ಉಂಟಾಗುವುದಿಲ್ಲ ಎಂದು ಠಾಕೂರ್ ತಿಳಿಸಿದ್ದರು.

ನಿನ್ನೆ ಪಕ್ಷದ ಹಿರಿಯ ನಾಯಕ ಯಶವಂತ್ ಸಿನ್ಹಾ ಮತ್ತು ಶಹನ್ವಾಜ್ ಹುಸ್ಸೇನ್ ಅವರು ಸಿನ್ಹಾ ಅವರೊಂದಿಗೆ ಮಾತಕತೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement