ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಚಿವ ದಿನೇಶ್ ಗುಂಡುರಾವ್ ಗೆ ಹೈಕೋರ್ಟ್ ನೋಟೀಸ್

Mainashree
Updated On : 5 Aug 2013, 4:31 am

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮವೆಸಗಿರುವ ಆರೋಪದ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಹೈಕೋರ್ಟ್ ಸೋಮವಾರ ನೋಟೀಸ್ ಜಾರಿ ಮಾಡಿದೆ.

ಗಾಂಧಿನಗರ ಶಾಸಕ ದಿನೇಶ್ ಗುಂಡರಾವ್ ಅವರು ಚುನಾವಣೆ ಸಂಧರ್ಭದಲ್ಲಿ ಅಕ್ರಮವೆಸಗಿದ್ದಾರೆಂದು ಆರೋಪಿಸಿ ಹೈಕೋರ್ಟ್ನಲ್ಲಿ ನಾಗರಾಜ್ ಎಂಬುವವರು ಅರ್ಜಿ ಸಲ್ಲಿಸಿದ್ದರು.

ಚುನಾವಣೆ ಸಂದರ್ಭದಲ್ಲಿ ದಿನೇಶ್ ಗುಂಡುರಾವ್ ಅವರಿಗೆ ನಾಗರಾಜ್ ಪ್ರತಿಸ್ಫರ್ಧಿಯಾಗಿದ್ದರು. ಆದರೆ ಚುನಾವಣೆಯಲ್ಲಿ ದಿನೇಶ್ ಅವರು ನಾಗರಾಜ್ ಅವರನ್ನು ಪರಾಜಿತಗೊಳಿಸಿದ್ದರು.

ಪರಾಜಿತಗೊಂಡಿದ್ದ ನಾಗರಾಜ್ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂದು ದೂರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ದಿನೇಶ್ ಗುಂಡುರಾವ್ ಮತ್ತು ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement