ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

7ನೇ ದಿನಕ್ಕೆ ಕಾಲಿಟ್ಟ ತೆಲಂಗಾಣ ವಿರೋಧಿ ಹೋರಾಟ

ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಸತತ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳೀಯ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

Srinivasa Murthy VN
Updated On : 6 Aug 2013, 4:18 am

ಅನಂತಪುರ: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಸತತ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳೀಯ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ತೆಲಂಗಾಣ ರಚನೆಯನ್ನು ವಿರೋಧಿಸಿ ರಾಜ್ಯಾದ್ಯಂತ ಸಮೈಕ್ಯ ಆಂಧ್ರಪ್ರದೇಶ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಾದ ವಿಜಯವಾಡ, ವಿಶಾಖ ಪಟ್ಟಣಂ ಮತ್ತು ರಾಯಲಸೀಮೆ ಜಿಲ್ಲೆಗಳಾದ ಅನಂತಪುರ, ಕರ್ನೂಲು, ಕಡಪ, ನೆಲ್ಲೂರು ಮತ್ತು ನಲ್ಗೊಂಡ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ತಮ್ಮ ತಮ್ಮ ಕೆಲಸವನ್ನು ಬಹಿಷ್ಕರಿಸಿರುವ ಸೀಮಾಂಧ್ರ ಪ್ರದೇಶದ ಸರ್ಕಾರೀ ಮತ್ತು ಖಾಸಗೀ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದರಿಂದ, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಅನಂತಪುರ ಜಿಲ್ಲೆಯ ಪ್ರಮುಖ ರಸ್ತೆಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿದ್ದು, ರೈಲು ಸಂಚಾರ ಅಸ್ತವ್ಯಸ್ಥಗೊಂಡಿದೆ. ಕೆಲ ವಿದ್ಯಾರ್ಥಿ ಸಂಘಟನೆಗಳು ಹೈದರಾಬಾದ್ ನಗರವನ್ನು ತೆಲಂಗಾಣ ಭಾಗಕ್ಕೆ ರಾಜಧಾನಿಯಾಗಿ ಘೋಷಿಸಬಾರದು ಎಂದು ಆಗ್ರಹಿಸಿ ಅನಂತಪುರ, ಪೆನುಗೊಂಡ ಮತ್ತು ಧರ್ಮವರಂ ಜಿಲ್ಲೆಗಳಲ್ಲಿ ಬೈಕ್ ರ್ಯಾಲಿ ನಡೆಸುತ್ತಿದ್ದಾರೆ. ಇದರಿಂದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಅಲ್ಲದೆ ಸೀಮಾಂಧ್ರ ಪ್ರದೇಶದ ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿದ್ದು, ಜಿಲ್ಲಾ ನ್ಯಾಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒಟ್ಟಾರೆ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಮತ್ತು ರಾಜಧಾನಿಯಾಗಿ ಹೈದರಾಬಾದ್ ನಗರವನ್ನು ಘೋಷಿಸುವ ವಿಚಾರ ಸೀಮಾಂಧ್ರ ಹೋರಾಟಗಾರರನ್ನು ರೊಚ್ಚಿಗೆಬ್ಬಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement