ಬಿ.ಬಿ.ಶಿವಪ್ಪ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು
ವಿಧಾನ ಪರಿಷತ್ ಸದಸ್ಯ ಬಿ.ಬಿ.ಶಿವಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಗಂಭೀರಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾಸನ: ವಿಧಾನ ಪರಿಷತ್ ಸದಸ್ಯ ಬಿ.ಬಿ.ಶಿವಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಗಂಭೀರಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಪ್ಪ ಅವರಿಗೆ ಇಂದು ಸಂಜೆ ಇದ್ದಕ್ಕಿದ್ದಂತೆಯೇ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಹಾಸನದ ವಾತ್ಸಲ್ಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.