ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉಪ ಸಮರ: ಕೈ ಗೆಲುವಿಗೆ 122 ಶಾಸಕರ ನಿಯೋಜನೆ

ಲೋಕಸಭಾ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಇದಕ್ಕಾಗಿ ತನ್ನ ಎಲ್ಲಾ 122 ಶಾಸಕರಿಗೂ ಉಸ್ತುವಾರಿ ನೀಡಿದೆ.

Srinivasa Murthy VN
Updated On : 9 Aug 2013, 2:33 am

ಬೆಂಗಳೂರು: ಲೋಕಸಭಾ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಇದಕ್ಕಾಗಿ ತನ್ನ ಎಲ್ಲಾ 122 ಶಾಸಕರಿಗೂ ಉಸ್ತುವಾರಿ ನೀಡಿದೆ.

ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಎರಡು ಕ್ಷೇತ್ರಗಳ ಲೋಕಸಭಾ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಇದಕ್ಕಾಗಿ ತನ್ನ 122 ಶಾಸಕರನ್ನು ಬಳಸಿಕೊಳ್ಳಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ನಾಳೆ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಎಲ್ಲ 122 ಶಾಸಕರು ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸುವ ವಿಶ್ವಾಸವಿದೆ. ಇದಕ್ಕಾಗಿ ನಮ್ಮ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಎಲ್ಲ 122 ಶಾಸಕರು ಕೂಡ ತಮ್ಮ ಬೆಂಬಲಿಗರೊಂದಿಗೆ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ನಾಳೆ ಈ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯಲಾಗಿದ್ದು, ಪಕ್ಷದ ನಾಯಕರು ಮತ್ತು ಪಕ್ಷದ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ್ದೇವೆ ಎಂದು ಹೇಳಿದರು.

ಒಟ್ಟಾರೆ ಪ್ರಸಕ್ತ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಜಂಟಿಯಾಗಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಪಣ ತೊಟ್ಟಿವೆ. ಪ್ರತಿ ಪಕ್ಷಗಳ ಮೈತ್ರಿಯನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲು ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement