ಮಾಜಿ ಶಾಸಕ ಎಂ.ಶ್ರೀನಿವಾಸ್‌ಗೆ ಶೋಕಾಸ್ ನೋಟಿಸ್
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ರಮ್ಯಾ ವಿರುದ್ದ...
ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ರಮ್ಯಾ ವಿರುದ್ದ ಅವಹೇಳನ ಹೇಳಿಕೆ ನೀಡಿದ್ದ, ಜೆಡಿಎಸ್‌ನ ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರಿಗೆ ಶನಿವಾರ ರಾಮನಗರ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ನಟಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಶ್ರೀನಿವಾಸ್ ಹಾಗೂ ಜೆಡಿಎಸ್‌ನ ಅಭ್ಯರ್ಥಿ ಪುಟ್ಟರಾಜು ವಿರುದ್ಧ, ಸಾಮಾನ್ಯ ನಡತೆ, ನಿಯಮಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ವಕ್ತಾರ ಸತ್ಯಾನಂದ ಅವರು ರಾಮನಗರ ಜಿಲ್ಲಾಧಿಕಾರಿ ಅವರಿಗೆ ದೂರು ಸಲ್ಲಿಸಿದ್ದರು.
ಕಾಂಗ್ರೆಸ್ ಸಲ್ಲಿಸಿದ ದೂರಿನನ್ವಯ ಎಂ. ಶ್ರೀನಿವಾಸ್ ಅವರಿಗೆ ರಾಮನಗರ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಪ್ರತಿಸ್ಪರ್ಧಿಗಳ ಖಾಸಗಿ ಬದುಕಿನ ವಿಚಾರಗಳನ್ನು ಯಾರು ರಾಜಕೀಯ ಪ್ರಚಾರದ ಸಂದರ್ಭದಲ್ಲಿ ಬಳಸಬಾರದು ಎಂಬ ಅಂಶ ಚುನಾವಣೆ ನೀತಿ ಸಂಹಿತೆಯಲ್ಲಿ ಇದೆ. ಹೀಗಾಗಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ ಎಂದರು.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ, ಟೀಕೆಗೆ ಗುರಿಯಾಗಿದ್ದಾರು. ನಟಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಮ್ಮಾ ಅವರು ಪ್ರನಾಳ ಶಿಶು ಇದ್ದಂತೆ. ಅವರಿಗೆ ರಾಜಕೀಯದಲ್ಲಿ ಎಳ್ಳಷ್ಟೂ ಅನುಭವವಿಲ್ಲ. ಜಿಲ್ಲೆಯ ಸಮಸ್ಯೆಗಳ ಕುರಿತು ಮತ್ತು ಹಳ್ಳಿಯ ನಾಡಿಮಿಡಿತ ಗೊತ್ತಿಲ್ಲ. ಇಂತಹ ಅನನುಭವಿಗೆ ಜನತೆ ಬೆಂಬಲಿಸಬಾರದು ಎಂದು ಶ್ರೀನಿಲಾಸ್ ಹೇಳಿದ್ದರು.