ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಮ್ಯಾ ವಿರುದ್ಧ ಹೇಳಿಕೆ: ಮಾಜಿ ಶಾಸಕ ಶ್ರೀನಿವಾಸ್ ವಿಷಾದ

ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಎಸ್ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

Srinivasa Murthy VN
Updated On : 10 Aug 2013, 3:46 am

ಮಂಡ್ಯ: ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಎಸ್ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ರಮ್ಯಾ ವಿರುದ್ಧದ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಂದು ಮಂಡ್ಯದ ತಮ್ಮ ನಿವಾಸದಲ್ಲಿ ಮಾತನಾಡಿದ ಶ್ರೀನಿವಾಸ್ ಅವರು, ರಮ್ಯಾ ವಿರುದ್ಧ ನಾನು ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ. ಪತ್ರಿಕೆಯ ವರದಿಯನ್ನು ಮಾತ್ರ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೆ ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಮಹಿಳೆಯರ ಬಗ್ಗೆ ನನಗೆ ಸಾಕಷ್ಟು ಗೌರವವಿದೆ. ನನ್ನ ಮಾತಿನಿಂದ ರಮ್ಯಾ ಅವರಿಗೆ ನೋವಾಗಿದ್ದರೆ ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ನಿನ್ನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸ್ ಅವರು, ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಮ್ಯಾ ಅವರಿಗೆ ತಂದೆ ಮತ್ತು ತನ್ನ ಜಾತಿ ಯಾವುದೆಂದು ಗೊತ್ತಿಲ್ಲ. ಅವರು ಪ್ರನಾಳ ಶಿಶು ಇದ್ದಹಾಗೆ ಎಂದು ಲೇವಡಿ ಮಾಡಿದ್ದರು. ಶ್ರೀನಿವಾಸ್ ಅವರ ಈ ಹೇಳಿಕೆಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಮಾಧ್ಯಮಗಳು ಕೂಡ ಶ್ರೀನಿವಾಸ್ ಹೇಳಿಕೆಯನ್ನು ಖಂಡಿಸಿದ್ದವು. ಅಲ್ಲದೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಕೂಡ ವಿಷಾದ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement