ವಿಶ್ವ ಬ್ಯಾಡ್ಮಿಂಟನ್: ಸೆಮಿಫೈನಲ್ನಲ್ಲಿ ಸೋಲು; ಸಿಂಧುಗೆ ಕಂಚು
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಸೆಮಿಫೈನಲ್ನಲ್ಲಿ ಭಾರತದ ಆಟಗಾರ್ತಿ ಪಿ.ವಿ. ಸಿಂಧು ಸೋಲನುಭವಿಸಿದ್ದು...
ಗಾಂಗ್ಚೌ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಸೆಮಿಫೈನಲ್ನಲ್ಲಿ ಭಾರತದ ಆಟಗಾರ್ತಿ ಪಿ.ವಿ. ಸಿಂಧು ಸೋಲನುಭವಿಸಿದ್ದು, ಕಂಚಿನ ಪದಕಕ್ಕೆ ತೃಪ್ತಿ ಪಡಬೇಕಾಯಿತು.
ಚೀನಾದ ಗ್ಯಾಂಗ್ಜೌನಲ್ಲಿ ಇಂದು ನಡೆದ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್ನ ರೆಚನಕೊ ವಿರುದ್ಧ 10-21, 13-21 ನೇರ ಸೆಟ್ಗಳಿಂದ ಪರಾಭವಗೊಂಡರು. ಇದರೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಿಂಧು ಅವರ ಚಿನ್ನದ ಪದಕ ಗೆಲ್ಲುವ ಕನಸು ನನಸಾಗಲಿಲ್ಲ.
ಆರಂಭದಿಂದಲು ಥಾಯ್ಲೆಂಡ್ನ ರೆಚನಕೊ ಅವರು ಪಂದ್ಯದ ಮೇಲೆ ತಮ್ಮ ಹಿಡಿತ ಸಾಧಿಸಿದ್ದರು. ಹೀಗಾಗಿ ರೆಚನಕೊ ಅವರನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲ್ಲಿಲ್ಲ. ಸಿಂಧು ಸೋಲಿನೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತಕ್ಕೆ ಪ್ರಥಮ ಕಂಚು ಸಿಕ್ಕಿದೆ.
ನಿನ್ನೆ ಕ್ವಾಟರ್ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸೆಮಿಫೈನಲ್ಗೆ ಪ್ರವೇಶಿಸಿದ್ದ ಸಿಂಧು ಅವರು, ಸೆಮಿಫೈನಲ್ನಲ್ಲಿ ಗೆಲ್ಲುವ ಭರವಸೆ ಮೂಡಿಸಿದ್ದರು.