ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಐವರಿಗೆ ಗಾಯ

Srinivasa Murthy VN
Updated On : 11 Aug 2013, 6:30 am

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದಿದ್ದು, ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಕಟ್ಟಡದಲ್ಲಿದ್ದ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದ ಅವಶೇಷಗಳ ಕೆಳಗೆ ಸಿಲುಕಿಕೊಂಡಿರುವ ಕಾರ್ಮಿಕರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಸಿದು ಬಿದ್ದಿರುವ ವಾಣಿಜ್ಯ ಕಟ್ಟಡ ರಹೀಮ್ ಅವರಿಗೆ ಸೇರಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಿಟಿಎಂ ಲೇಔಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement